2025-26ನೇ ಸಾಲಿಗೆ ವಿಶೇಷ ಪ್ರೋತ್ಸಾಹಧನ ಯೋಜನೆಯಡಿ (B.Ed Vishesha Protsahadhana Yojana) ವಿದ್ಯಾರ್ಥಿಗಳಿಗೆ 25,000 ರೂ. ಹಣಕಾಸು ನೆರವು ನೀಡಲು ಅರ್ಜಿ ಆಹ್ವಾನಿಸಿದೆ. ಈ ಕುರಿತ ಪೂರ್ತಿ ಮಾಹಿತಿ ಇಲ್ಲಿದೆ…
ಶಿಕ್ಷಕರ ವೃತ್ತಿಯಲ್ಲಿ ಸೇವೆ ಸಲ್ಲಿಸುವ ಮಹತ್ವಾಕಾಂಕ್ಷೆಯೊಂದಿಗೆ ಬಿ.ಎಡ್ ಕೋರ್ಸ್ ಓದುತ್ತಿರುವ ಹಾವೇರಿ ಜಿಲ್ಲೆಯ ವಿದ್ಯಾರ್ಥಿಗಳಿಗೆ ವಿಶೇಷ ಪ್ರೋತ್ಸಾಹಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಕರ್ನಾಟಕ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು 2025-26ನೇ ಸಾಲಿಗೆ ವಿಶೇಷ ಪ್ರೋತ್ಸಾಹಧನ ಯೋಜನೆಯಡಿ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ 25,000 ರೂ. ಹಣಕಾಸು ನೆರವು ನೀಡಲಾಗುತ್ತಿದೆ.
ಯಾರು ಈ ಸೌಲಭ್ಯಕ್ಕೆ ಅರ್ಹರು?
ಈ ಯೋಜನೆಯು ಹಾವೇರಿ ಜಿಲ್ಲೆಯ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಮಾತ್ರ ಅನ್ವಯಿಸುತ್ತದೆ. ಮುಸ್ಲಿಂ, ಕ್ರಿಶ್ಚಿಯನ್, ಸಿಖ್, ಜೈನ್, ಬೌದ್ಧ, ಪಾರ್ಸಿ ಸಮುದಾಯಕ್ಕೆ ಒಳಪಡುವ ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆಯಬಹುದು.
ಜೊತೆಗೆ ವಿದ್ಯಾರ್ಥಿಗಳು ಕರ್ನಾಟಕದ ನಿವಾಸಿಗಳು ಆಗಿರಬೇಕು. ಪೋಷಕರ ವಾರ್ಷಿಕ ಆದಾಯ 6 ಲಕ್ಷ ರೂ. ಒಳಗೆ ಇರಬೇಕು. ಸರ್ಕಾರಿ ನೌಕರರು ಹಾಗೂ ಪೂರ್ಣಕಾಲಿಕ ಖಾಸಗಿ ಉದ್ಯೋಗಿಗಳು ಅರ್ಹರಲ್ಲ. ಮೆರಿಟ್ ಆಧಾರದ ಮೇಲೆ ಅರ್ಹ ವಿದ್ಯಾರ್ಥಿಗನ್ನು ಆಯ್ಕೆ ಮಾಡಲಾಗುತ್ತದೆ.
ವಿದ್ಯಾರ್ಥಿಗಳು ಬಿ.ಎಡ್ ಕೋರ್ಸಿಗೆ ದಾಖಲಾಗಿ, ಶುಲ್ಕ ಪಾವತಿ ಸೇರಿದಂತೆ ಎಲ್ಲಾ ಸಂಬಂಧಿಸಿದ ದಾಖಲೆಗಳನ್ನು ಸಲ್ಲಿಸುವುದು ಕಡ್ಡಾಯ. ಮಾನ್ಯತೆ ಪಡೆದಿರುವ ಸರ್ಕಾರಿ, ಅರೆ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಬಿ.ಎಡ್ ಕಾಲೇಜುಗಳ ವಿದ್ಯಾರ್ಥಿಗಳೇ ಮಾತ್ರ ಈ ಸೌಲಭ್ಯ ಪಡೆಯಲು ಅರ್ಹರಾಗುತ್ತಾರೆ.

ಇದನ್ನೂ ಓದಿ: Free Sewing Machine- ಹಾವೇರಿ ಜಿಲ್ಲೆ: ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ವಿತರಣೆಗೆ ಅರ್ಜಿ ಆಹ್ವಾನ
ಅರ್ಜಿಯನ್ನು ಹೇಗೆ ಸಲ್ಲಿಸಬೇಕು?
ಅರ್ಹ ವಿದ್ಯಾರ್ಥಿಗಳು ವಿಶೇಷ ಪ್ರೋತ್ಸಾಹಧನ ಯೋಜನೆಯಡಿ 25,000 ರೂ. ಆರ್ಥಿಕ ನೆರವು ಪಡೆಯಲು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.
ಆನ್‌ಲೈನ್ ಅರ್ಜಿ ಸಲ್ಲಿಸಿದ ಬಳಿಕ ಅದರ ಹಾರ್ಡ್ ಕಾಪಿ ಹಾಗೂ ವಿದ್ಯಾಭ್ಯಾಸ ದಾಖಲೆಗಳು, ಕಾಲೇಜು ಪ್ರವೇಶ ದಾಖಲೆ, ಶುಲ್ಕ ಪಾವತಿ ರಸೀದಿ, ಆದಾಯ ಪ್ರಮಾಣ ಪತ್ರ ಹಾಗೂ ಗುರುತಿನ ದಾಖಲೆಗಳ ಪ್ರತಿಗಳನ್ನು ತಾಲೂಕು ಅಥವಾ ಜಿಲ್ಲಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಕ್ಕೆ ಸಲ್ಲಿಸಬೇಕು.
ಇದನ್ನೂ ಓದಿ: Haveri Minister Candidate List- ಹಾವೇರಿ ಜಿಲ್ಲೆಯ ಶಾಸಕರಲ್ಲಿ ಯಾರಿಗೆ ಒಲಿಯಲಿದೆ ಮಂತ್ರಿ ಭಾಗ್ಯ?
ಸಂಪರ್ಕಿಸಬೇಕಾದ ವಿಳಾಸಗಳು
ಯೋಜನೆಗೆ ಸಂಬಂಧಿಸಿದಂತೆ ಯಾವುದೇ ಅನುಮಾನಗಳಿದ್ದರೆ, ಹಾವೇರಿ ಜಿಲ್ಲೆಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ನೇರವಾಗಿ ಸಂಪರ್ಕಿಸಬಹುದು.
ವಿಳಾಸ: ಮೌಲಾನಾ ಆಜಾದ್ ಭವನ, ಶಿವಾಜಿ ನಗರ, 3ನೇ ಕ್ರಾಸ್, ಹಾವೇರಿ, ದೂರವಾಣಿ: 08375-234505
ಹಾವೇರಿ ಜಿಲ್ಲೆಯ ಆಯಾ ತಾಲೂಕು ವಿದ್ಯಾರ್ಥಿಗಳು ಬ್ಯಾಡಗಿ, ಹಿರೇಕೆರೂರು, ರಾಣೇಬೆನ್ನೂರು, ಶಿಗ್ಗಾವಿ, ಹಾನಗಲ್ಲ, ಹಾವೇರಿ ಹಾಗೂ ಸವಣೂರು ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು ಕೂಡ ಸಂಪರ್ಕಿಸಬಹುದಾಗಿದೆ.
ಇದನ್ನೂ ಓದಿ: Free Sprinkler Scheme- ಉಚಿತ ಸ್ಪಿಂಕ್ಲರ್ ಸೌಲಭ್ಯಕ್ಕೆ ರೈತರಿಂದ ಅರ್ಜಿ ಆಹ್ವಾನ
ಅರ್ಜಿಯ ಕೊನೆಯ ದಿನಾಂಕ: ಡಿಸೆಂಬರ್ 31, 2025
ಅಂತಿಮ ದಿನಾಂಕಕ್ಕೂ ಮುನ್ನವೇ ಎಲ್ಲಾ ದಾಖಲೆಗಳ ಜೊತೆಗೆ ಅರ್ಜಿ ಸಲ್ಲಿಸುವುದು ಉತ್ತಮ. ಈ ವಿಶೇಷ ಪ್ರೋತ್ಸಾಹಧನವು ಶಿಕ್ಷಕರಾಗುವ ಕನಸನ್ನು ಹೊಂದಿರುವ ಅನೇಕ ಅಲ್ಪಸಂಖ್ಯಾತ ಬಿ.ಎಡ್ ವಿದ್ಯಾರ್ಥಿಗಳಿಗೆ ಯಶಸ್ಸಿನ ಮೆಟ್ಟಿಲಾಗಲಿ!
ಅಧಿಕೃತ ವೆಬ್‌ಸೈಟ್: dom.karnataka.gov.in

ಹಾವೇರಿ ಜಿಲ್ಲೆಯ ಸುದ್ದಿ, ಸರ್ಕಾರಿ ಯೋಜನೆಗಳು, ಅರ್ಜಿ ಪ್ರಕ್ರಿಯೆಗಳು, ರೈತರ ಉಪಯುಕ್ತ ಮಾಹಿತಿ ಮತ್ತು ಸ್ಥಳೀಯ ಅಪ್ಡೇಟ್ಗಳನ್ನು ನಿಖರ ಹಾಗೂ ಸರಳವಾಗಿ ಹಂಚುವ ಜಾಲತಾಣ
2 thoughts on “B.Ed Vishesha Protsahadhana Yojana- ವಿದ್ಯಾರ್ಥಿಗಳಿಗೆ ವಿಶೇಷ ಪ್ರೋತ್ಸಾಹಧನ | ಹಾವೇರಿ ಜಿಲ್ಲೆಯ ವಿದ್ಯಾರ್ಥಿಗಳಿಗೆ ₹25,000 ಆರ್ಥಿಕ ನೆರವು”